ಉಪ್ಪಿನಂಗಡಿ: ಸೀಯಾಳದ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಮಕ್ಕಳೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಇಲ್ಲಿನ ಧರ್ನಪ್ಪ ಪೂಜಾರಿ (65) ಕೊಲೆಯಾದ ವ್ಯಕ್ತಿ. ಇವರನ್ನು ಮಕ್ಕಳಾದ ಮೋನಪ್ಪ ಹಾಗೂ ನವೀನ ಎಂಬವರು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆನ್ನಲಾಗಿದ್ದು, ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಧರ್ನಪ್ಪ ಪೂಜಾರಿ ಮನೆಯಲ್ಲಿದ್ದ ತೆಂಗಿನ ಮರದಿಂದ ತೆಂಗಿನಕಾಯಿ, ಸೀಯಾಳಗಳನ್ನು ತೆಗೆದು ಮಾರಾಟ ಮಾಡುತ್ತಿದ್ದು, ಇದೇ ವಿಚಾರಕ್ಕೆ ಮಕ್ಕಳಲ್ಲಿ ಆಗಾಗಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಭಾನುವಾರ ಮಧ್ಯರಾತ್ರಿಯೂ ಇದೇ ವಿಚಾರಕ್ಕೆ ತಂದೆ ಮಕ್ಕಳೊಳಗೆ ಜಗಳವಾಗಿದ್ದು, ಈ ಸಂದರ್ಭ ತಂದೆಗೆ ಮಕ್ಕಳು ಕತ್ತಿಯಿಂದ ಕಡಿದಿದ್ದು,ಗಂಭೀರ ಗಾಯಗೊಂಡ ಧರ್ನಪ್ಪ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದುಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.