ಮಂಗಳೂರು: ಲಿವಾ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕುಡ್ಲದ ಯುವತಿ ದಿವಿತಾ ರೈ ಅವರಿಗೆ ಬಂಟರ ಮಾತೃ ಸಂಘ ಹಾಗೂ ಮಂಗಳೂರು ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆ.6ರಂದು ಸಂಜೆ 4 ಗಂಟೆಗೆ ಮಂಗಳೂರಿನ ಗೀತಾ ಶೆಟ್ಟಿ ಮೆಮೊರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ಪೂರ್ವದಲ್ಲಿ ಜ್ಯೋತಿ ವೃತ್ತದಿಂದ ಸಭಾಂಗಣದವರೆಗೆ ಮೆರವಣಿಗೆ ಮೂಲಕ ತುಳುನಾಡ ಸಾಂಪ್ರದಾಯಿಕ ಶೈಲಿಯಲ್ಲಿ ದಿವಿತಾ ರೈ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುವುದು ಎಂದರು.

170 ದೇಶಗಳ ಪ್ರತಿನಿಧಿಗಳು ಭಾಗವಹಿಸುವ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದಿವಿತಾ ರೈ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಸ್ಪರ್ಧೆಯು ಕೇವಲ ಬಾಹ್ಯ ಸೌಂದರ್ಯಕ್ಕೆ ಮಾತ್ರವಲ್ಲ, ಆಂತರಿಕ ಸೌಂದರ್ಯ ಕೂಡ ಅಷ್ಟೇ ಮಹತ್ವದ್ದು ಎಂಬುದನ್ನು ನಿರೂಪಿಸಿದೆ. ದಿವಿತಾ ಈ ಸ್ಪರ್ಧೆಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಕುರಿತ ವಿಷಯವನ್ನು ಅವರ ಆಯ್ಕೆ ಮಾಡಿಕೊಂಡಿರುವುದು ಬಂಟರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಸಮಿತಿ ಅಧ್ಯಕ್ಷೆ ವೀಣಾ ಟಿ. ಶೆಟ್ಟಿ ಹೇಳಿದರು.

ಮಂಗಳೂರು ಮೂಲದ ಸದ್ಯ ಮುಂಬೈಯಲ್ಲಿ ನೆಲೆಸಿರುವ ಪವಿತ್ರಾ– ದಿಲೀಪ್ ರೈ ದಂಪತಿ ಪುತ್ರಿ ದಿವಿತಾ, ವಾಸ್ತುಶಿಲ್ಪಿ ಹಾಗೂ ಮಾಡೆಲ್ ಆಗಿದ್ದಾರೆ. ಇವರ ಅಣ್ಣ ದೈವಿಕ್ ರೈ ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿದ್ದು, 2017ರಲ್ಲಿ ವಿಶ್ವಕಪ್ ಜಯಿಸಿದ ಭಾರತ ಕ್ರಿಕೆಟ್ ತಂಡದಲ್ಲಿದ್ದರು ಎಂದರು. ಪ್ರಮುಖರಾದ ನಯನಾ ಶೆಟ್ಟಿ, ಶಾಲಿನಿ ಶೆಟ್ಟಿ, ಸವಿತಾ ಚೌಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.