ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಮಠ ಎಂಬಲ್ಲಿ ಮನೆಯ ಒಳಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆ ಸಾಮಗ್ರಿ ಸುಟ್ಟು ಕರಕಲಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಮಠ ನಿವಾಸಿ ಅಸ್ಮಾಮ್ ಎಂಬುವರ ಮನೆಯಲ್ಲಿ ಈ ಅವಘಡ ನಡೆದಿದೆ. ಮನೆ ಮಾಲೀಕ ವಿದೇಶದಲ್ಲಿದ್ದು, ಪತ್ನಿ ಖೌಸರ್ ಮನೆಗೆ ಬೀಗ ಹಾಕಿ ಮಕ್ಕಳೊಂದಿಗೆ ಪೇಟೆ ತೆರಳಿದ್ದರು. ಈ ವೇಳೆ ಮನೆ ಒಳಗಿನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾಗಿದೆ.

ಮನೆಯ ಒಳಗಿನಿಂದ ಹೊಗೆ ಹೊರ ಬರುವುದನ್ನು ಗಮನಿಸಿದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಶೀದ್, ಸ್ಥಳೀಯರಾದ ಸಿದ್ದಿಕ್, ಹನೀಫ್, ಯು.ಟಿ.ಫಯಾಜ್ ಬೆಂಕಿ ನಂದಿಸಲು ಮುಂದಾದರು. ಆ ವೇಳೆಗೆ ಪುತ್ತೂರು ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.

ಮನೆಯ ಒಳಗೆ ಇದ್ದ ವಿದ್ಯುತ್ ಉಪಕರಣಗಳು, ಪೀಠೋಪಕರಣ, ಬಟ್ಟೆ, ದಾಖಲೆ ಪತ್ರಗಳು ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.