ಮಂಗಳೂರು: ಸೌದಿ ಅರೇಬಿಯಾದ ದಮಾಮ್ ನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹಾರಾಟ ವಿಳಂಬವಾಗಿದ್ದು ಪ್ರಯಾಣಿಕರು ಸಮಸ್ಯೆ ಎದುರಿಸಿದರು.

ವಿಮಾನವು ದಮಾಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ರಾತ್ರಿ 8.05 ನಿಮಿಷಕ್ಕೆ ಹೊರಟು, ಗುರುವಾರ ಮುಂಜಾನೆ 5.15ಕ್ಕೆ ಮಂಗಳೂರು ತಲುಪಬೇಕಿತ್ತು. ಆದರೆ ಗುರುವಾರ ರಾತ್ರಿವರೆಗೂ ವಿಮಾನವು ಮಂಗಳೂರಿಗೆ ಬಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

’ಗುರುವಾರ ಸಂಜೆ 5.20ಕ್ಕೆ ವಿಮಾನವು ದಮಾಮ್‌ನಿಂದ ಹೊರಟಿದ್ದು, ಶುಕ್ರವಾರ ಮುಂಜಾನೆ 1.20ಕ್ಕೆ ತಲುಪುವ ನಿರೀಕ್ಷೆ ಇದೆ’ ಎಂದು ವಿಮಾನನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಪ್ರಯಾಣಿಕರಿಗೆ ಮಾಹಿತಿ ನೀಡದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಯಾಣಿಕರ ಬಂಧುಗಳು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.