ಮಂಗಳೂರು: ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ನಗರ ಪೂರ್ವ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ನೈಜೀರಿಯಾದ ಪ್ರಜೆ ಅಂಕಿಟೋಲಾ ಹಾಗೂ ಘಾನಾ ಪ್ರಜೆ ಸಲಾಮ್ ಕ್ರಿಶ್ಚಿಯನ್ ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿ ವಾಸವಿದ್ದರು. ಅವರು ತಮ್ಮ ಸ್ನೇಹಿತ ಅನಿಲ್ ಡಿಸಿಲ್ವ ಎಂಬುವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನಲ್ಲಿರುವ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.