ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮಂಗಳವಾರ ಆರಂಭವಾಗಿದೆ.

ಕೊಣಾಜೆ ಮೀಸಲು ಅರಣ್ಯ ಪ್ರದೇಶದ ಆಸುಪಾಸಿನಲ್ಲಿ ಓಡಾಡುತ್ತಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಆನೆ ಶಿಬಿರದಿಂದ ಐದು ಆನೆಗಳು ರೆಂಜಿಲಾಡಿಗೆ ಬಂದಿವೆ.

ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗೂ ಮಹೇಂದ್ರ ಆನೆಗಳು ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿವೆ.

ಕಾರ್ಯಾಚರಣೆಗೆ ಬಂದಿದೆ. ಲಾರಿಗಳ ಮೂಲಕ ಆನೆಗಳನ್ನು ಸೋಮವಾರ ರಾತ್ರಿ ಕಡಬಕ್ಕೆ ತರಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ಕಾಡಾನೆಗಳಿಗಾಗಿ ಶೋಧ ನಡೆಸಲಿದೆ. ಇದಕ್ಕಾಗಿ ಡ್ರೋನ್ ಗಳನ್ನೂ ಬಳಸಲಾಗುತ್ತಿದೆ.

ಕಾಡಾನೆಗಳ ಚಲನ ವಲನಗಳನ್ನು ಪತ್ತೆ ಹಚ್ಚಿ ಸಾಕಾನೆಗಳ ಸಹಕಾರದಲ್ಲಿ ಸೆರೆ ಕಾಡಾನೆಯನ್ನು ಹಿಡಿಯಲಾಗುತ್ತದೆ.

ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ಕಿಶೋರ್ ಕುಮಾರ್ ,ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಜೊತೆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.