ಶನಿವಾರ, 29 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ | ಗರ್ಭಿಣಿಯಾದ ಬಾಲಕಿ: ಮೂವರ ಬಂಧನ

Published 2 ಜೂನ್ 2024, 15:51 IST
Last Updated 2 ಜೂನ್ 2024, 15:51 IST
ಅಕ್ಷರ ಗಾತ್ರ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆಕೆ ಗರ್ಭವತಿಯಾಗುವಂತೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಠಾಣೆಯ ಪೊಲೀಸರು ಕಾನೂನಿನ ಸಂಘರ್ಷಕ್ಕೆ ಸಿಲುಕಿದ ಬಾಲಕನೂ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಅತ್ಯಾಚಾರಕ್ಕೊಳಗಾದ ಬಾಲಕಿ ಈಗ ಆರು ತಿಂಗಳ ಗರ್ಭಿಣಿ. ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ. ಫಾರೂಕ್‌, ಇಕ್ಬಾಲ್‌ ಹಾಗೂ ಇನ್ನೊಬ್ಬ ಬಾಲಕ ಬಂಧಿತರು. ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಿದ್ದೇವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಮೂವರು ಆರೋಪಿಗಳು ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ‘ ಎಂದು ಅವರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT