ಮಂಗಳೂರು: ಅಪಾಯದ ಮುನ್ಸೂಚನೆ ಇದ್ದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡರೆ ಭವಿಷ್ಯದಲ್ಲಿ ಉಂಟಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಮುರಲೀಮನೋಹರ ಚೂಂತಾರು ಅಭಿಪ್ರಾಯಪಟ್ಟರು.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಹದಿಂದ ಅಪಾಯ ಉಂಟಾದರೆ ಜನರ ಜೀವ ಉಳಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ನುರಿತ ಈಜುಗಾರರನ್ನು ಈಗಾಗಲೇ ಪತ್ತೆಮಾಡಲಾಗಿದೆ. ರಕ್ಷಣಾ ತಂಡಗಳನ್ನೂ ರಚಿಸಲಾಗಿದೆ ಎಂದು ತಿಳಿಸಿದ ಅವರು ಪ್ರತಿ ಘಟಕಗಳಲ್ಲಿ ಸಿಬ್ಬಂದಿಯನ್ನು ಗುರುತಿಸಾಗಿದ್ದು ಅವರೆಲ್ಲ ಸಿದ್ಧರಾಗಿಬೇಕು ಎಂದು ಸೂಚಿಸಿದರು.

ಮಂಗಳೂರು ತಾಲ್ಲೂಕಿನ ಸಮುದ್ರ ಕಿನಾರೆಗಳಾದ ಸೋಮೇಶ್ವರ, ಉಳ್ಳಾಲ, ಮೊಗವೀರ ಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು, ಸುರತ್ಕಲ್ ಮತ್ತು ಫಾತಿಮಾ ಬೀಚ್ಗಳಲ್ಲಿ ತಲಾ ಇಬ್ಬರು ಗೃಹರಕ್ಷಕರನ್ನು ನಿಯೋಜಿಸಲಾಗುವುದು. ನೆರೆ ಕಾಣಿಸಿಕೊಳ್ಳಬಹುದಾದ ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಮೂಲ್ಕಿ, ಕಡಬ ಪ್ರದೇಶಗಳಲ್ಲಿ ಗೃಹರಕ್ಷಕರು ಸನ್ನದ್ದರಾಗಿರಬೇಕು ಎಂದು ಸೂಚಿಸಿದ ಅವರು ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಾದ್ಯಂತ 60 ಗೃಹರಕ್ಷಕರನ್ನು ಒಳಗೊಂಡ ಪ್ರವಾಹ ರಕ್ಷಣಾ ತಂಡ ರಚಿಸಲಾಗುವುದು ಎಂದರು.

ಜಿಲ್ಲಾ ಉಪ ಕಮಾಂಡೆಂಟ್ ರಮೇಶ್, ಮಂಗಳೂರು ಘಟಕದ ಪ್ಲಟೂನ್ ಕಮಾಂಡರ್ ಮಾರ್ಕ್ ಸೇರಾ, ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ರಮೇಶ್, ಕಡಬ ಘಟಕದ ಘಟಕಾಧಿಕಾರಿ ತೀರ್ಥೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.