ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತರಲ್ಲಿ ಒಬ್ಬರಾದ, ಜಿಲ್ಲೆಯ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಸನ್ಮಾನಿಸಿದರು.

ಕಳೆದ ವರ್ಷ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದ ಹರೇಕಳ ಹಾಜಬ್ಬ ಅವರೂ ಇದ್ದರು.

ಇದಕ್ಕೂ ಮುನ್ನ ಸಚಿವ ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನಡೆಸಿದರು. ಧ್ವಜವಂದನೆ ಸ್ವೀಕರಿಸಿದ ಬಳಿಕ ಅವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೊನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.