ಮಂಗಳೂರು: 'ವೈರಲ್ ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ. ಈ ಬಗ್ಗೆ ತನಿಖೆಯಾಗಬೇಕು, ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಕುರಿತು ಅವರು ನಗರದಲ್ಲಿ ಪ್ರತಿಕ್ರಿಯೆ ನೀಡಿದರು.

'ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮವಿದ್ದಂತೆ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ' ಎಂದರು.

ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ವದಂತಿ ಅಷ್ಟೇ: ಡಿಸಿಎಂ ಅಶ್ವತ್ಥನಾರಾಯಣ

'ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸುವುದಿಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ' ಎಂದು ಹೇಳಿದರು.

ಇನ್ನಷ್ಟು...

ಹೊಸ ಮುಖ್ಯಮಂತ್ರಿ ಕುರಿತ ನಳಿನ್ ಕುಮಾರ್ ಕಟೀಲ್ ಆಡಿಯೊ ‘ನಕಲಿ’?

ನಾಯಕತ್ವ ಬದಲಾವಣೆ ಸಂದೇಶ ಬಂದಿಲ್ಲ: ಆರ್. ಅಶೋಕ

ನಳಿನ್ ಕುಮಾರ್ ಕಟೀಲ್ ಆಡಿಯೊ: ದೆಹಲಿಯಿಂದ ಬರ್ತಾರೆ ಹೊಸ ಸಿಎಂ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.