ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಟ್ವಾಳ: ಅಕ್ರಮ ಮರಳುಗಾರಿಕೆ, 18 ದೋಣಿ ವಶಕ್ಕೆ

Published : 4 ಅಕ್ಟೋಬರ್ 2024, 16:06 IST
Last Updated : 4 ಅಕ್ಟೋಬರ್ 2024, 16:06 IST
ಫಾಲೋ ಮಾಡಿ
Comments

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಪುದು ಮತ್ತು ಮಾರಿಪಳ್ಳ ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಸಲು ಸಿದ್ಧಗೊಂಡಿದ್ದ 18 ದೋಣಿಗಳನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಉಪ ನಿರ್ದೇಶಕಿ ಕೃಷ್ಣವೇಣಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಆರೋಪಿಗಳು ಸ್ಥಳದಲ್ಲಿ ಇರಲಿಲ್ಲ ಎಂದು ಗೊತ್ತಾಗಿದೆ.

ಒಟ್ಟು ₹ 40ಲಕ್ಷ ಮೌಲ್ಯದ ದೋಣಿ ವಶಪಡಿಸಿಕೊಳ್ಳಲಾಗಿದೆ. ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಎರಡು ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ ಮೋಹನ್, ಮಹದೇಶ್ವರ, ಸತ್ಯಭಾಮ, ಸಹಾಯಕ ಆಯುಕ್ತ ಹರ್ಷವರ್ಧನ್, ಮಂಗಳೂರು ತಹಶೀಲ್ದಾರ್ ಪ್ರಕಾಶ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್, ಕಂದಾಯ ನಿರೀಕ್ಷಕ ಜನಾರ್ದನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT