ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ಭಾನುವಾರ ಬೆಳಿಗ್ಗೆ ಬಾನೆತ್ತರಕ್ಕೆ ಹಾರಾಡುತ್ತಿದ್ದ ಧ್ವಜವನ್ನು ಕಂಡ ಕೂಲಿ ಕೆಲಸಕ್ಕೆ ಹೊರಟಿದ್ದ ಮಹಿಳೆಯೊಬ್ಬರು, ಚಪ್ಪಲಿ ಕಳಚಿ, ಧ್ವಜಕ್ಕೆ ಸೆಲ್ಯೂಟ್ ಹೊಡೆದು, ಮುಂದೆ ಸಾಗಿದರು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಗಾಂಧಿ ವಿಚಾರ ವೇದಿಕೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೆ ಅದೇ ದಾರಿಯಲ್ಲಿ ಹೊರಟಿದ್ದ ಕೂಲಿ ಕಾರ್ಮಿಕ ಮಹಿಳೆ ಧ್ವಜವನ್ನು ಕಂಡವರೇ, ಕೈಯಲ್ಲಿ ಹಿಡಿದ ಪರಿಕರಗಳನ್ನು ಬಗಲಿಗಿಟ್ಟು, ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಅಲ್ಲೇ ಸಮೀಪದಲ್ಲಿದ್ದವರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ಚಿತ್ರವನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರ ಧ್ವಜಕ್ಕೆ ಸೆಲ್ಯೂಟ್ ಮಾಡಿ ತನ್ನ ಪಾಡಿಗೆ ಕೆಲಸಕ್ಕೆ ಹೋದರಂತೆ. ಇದು ಭಾರತ ಸಂಭ್ರಮ, ಶ್ರದ್ಧೆ, ದೇಶಭಕ್ತಿ’ ಎಂದು ಅವರು ಬಣ್ಣಿಸಿದ್ದಾರೆ.

ಈ ಚಿತ್ರವನ್ನು ಕಂಡು ‘ಇದು ಭಾರತ’ ಎಂದು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬಲಡ್ಕ ವ್ಯಾಖ್ಯಾನಿಸಿದ್ದನ್ನು ಚಿಂತಕ ಅರವಿಂದ ಚೊಕ್ಕಾಡಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.

ಆನ್ಲೈನ್ನಲ್ಲೇ ಸ್ವಾತಂತ್ರ್ಯೋತ್ಸವ, ಮನೆ ಮುಂದೆ ಭೂಪಟ ರಚಿಸಿ ಪಾಲ್ಗೊಂಡ ಮಕ್ಕಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.