ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದ.ಕ | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: 130 ಕಿ.ಮೀ.ಉದ್ದದ ಮಾನವ ಸರಪಳಿ

Published : 15 ಸೆಪ್ಟೆಂಬರ್ 2024, 5:45 IST
Last Updated : 15 ಸೆಪ್ಟೆಂಬರ್ 2024, 5:45 IST
ಫಾಲೋ ಮಾಡಿ
Comments

ಮಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯಿಂದ ಸುಳ್ಯ ತಾಲ್ಲೂಕಿನ ಸಂಪಾಜೆ ಗಡಿಯವರೆಗೆ ಅಲ್ಲಲ್ಲಿ ಮಾನವ ಸರಪಳಿ ರಚಿಸಲಾಯಿತು.

ಜಿಲ್ಲೆಯಲ್ಲಿ ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿ ರಚಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿತ್ತು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಕ್ಕದಿಂದ ಕಣ್ಣೂರಿನವರಗೆ ಮಾನವ ಸರಪಳಿ ರಚಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈಜೋಡಿಸಿದರು. ಕದ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ. ಅವರು ಸಂವಿಧಾನದ ಪೀಠಿಕೆಯನ್ನು ಓದಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಉಪಮೇಯರ್ ಸುನೀತಾ, ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ ಮತ್ತಿತರರು ಭಾಗವಹಿಸಿದ್ದರು.

ಕುರಲ್ ಕಲಾತಂಡದ ಡೊಳ್ಳು ಕುಣಿತ, ಗಾರುಡಿಗೊಂಬೆ, ಚೆಂಡೆವಾದನಗಳು ವಿಶೇಷ ಆಕರ್ಷಣೆಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT