ಮುಡಿಪು: ‘ಕರಾವಳಿ ಭಾಗದಲ್ಲಿ ಸೇನಾ ನೇಮಕಾತಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಯುವ ಸಮು ದಾಯದಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಕಾರ್ಯ ಸರ್ಕಾರದಿಂದ ನಡೆಯುತ್ತಿದೆ’ ಎಂದು ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೂಸಾ ಅನುದಾನದಡಿ ನಿರ್ಮಿಸಲಾಗಿ ರುವ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ಕಟ್ಟಡ ಹಾಗೂ ವಿಭಾಗದ ಉದ್ಘಾಟನೆ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ನ ಯೋಜನೆ ಯಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ, ಉಡುಪಿಯಲ್ಲಿ ಕೋಟಿ ಚೆನ್ನಯ ಹಾಗೂ ಉತ್ತರ ಕನ್ನಡದಲ್ಲಿ ಹೇಂಜಾ ನಾಯ್ಕ ಅವರ ಹೆಸರಿನಲ್ಲಿ ಸೇನಾ ನೇಮಕಾತಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲು ಸರ್ಕಾರದಿಂದ ಯೋಜನೆ ರೂಪಿಸಲಾಗಿದೆ. ಇತರ ಜಿಲ್ಲೆಗಳಿಗೆ ಹೋಲಿಸಿದಾಗ ಕರಾವಳಿಯ ಜಿಲ್ಲೆಯಿಂದ ಸರ್ಕಾರಿ ಹುದ್ದೆಗಳಲ್ಲಿ ಸ್ಪರ್ಧಿಸುವವರ ಸಂಖ್ಯೆ ತುಂಬಾ ಕಡಿಮೆ. ಈ ನಿಟ್ಟಿನಲ್ಲಿ ಕರಾವಳಿಯ ಯುವಕರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ‘ಸಮಾಜದ ಪರಿವರ್ತನೆ, ಮೌಲ್ಯಾಧಾರಿತ ಶಿಕ್ಷಣದ ಅಗತ್ಯವನ್ನು ಮನಗಂಡು ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿದ ಮೊದಲ ವಿವಿ ಮಂಗಳೂರು ಎಂಬುದು ಹೆಮ್ಮೆಯ ವಿಚಾರ’ ಎಂದು ಹೇಳಿದರು.

ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯ ಪ್ರೊ.ಎಂ.ಎಸ್ ತಳವಾರ್ ಮಾತನಾಡಿದರು. ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್.ಧರ್ಮ, ಕಾರ್ಯಕಾರಿ ಎಂಜಿನಿಯರ್ ದೇವಿಪ್ರಸಾದ್ ಎಂ, ಹಣಕಾಸು ಅಧಿಕಾರಿ ಪ್ರೊ.ಜಯಪ್ಪ ಇದ್ದರು.

ಗಣಕವಿಜ್ಞಾನ ವಿಭಾಗದ ಪ್ರಾಧ್ಯಾ ಪಕ ಡಾ.ಬಿ.ಎಚ್ ಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಅವರು ಸ್ವಾಗತಿಸಿದರು. ಭೂಗೋಳಶಾಸ್ತ್ರ ವಿಭಾಗದ ಸಂಯೋಜಕ ಡಾ.ದಶರಥ ಪಿ.ಅಂಗಡಿ ವಂದಿಸಿದರು. ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.