ಮಂಗಳೂರು: ಕರ್ಣಾಟಕ ಬ್ಯಾಂಕ್ನ 915ನೇ ಶಾಖೆಯು ಗುರುವಾರ ಅಯೋಧ್ಯೆಯಲ್ಲಿ ಉದ್ಘಾಟನೆಗೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾದ ಅನಿಲ್ ಮಿಶ್ರಾ ನೂತನ ಶಾಖೆಯನ್ನು ಹಾಗೂ ಗೋಪಾಲ್ ನಾಗರಕಟ್ಟೆ ಮಿನಿ ಇ-ಲಾಬಿಯನ್ನು ಉದ್ಘಾಟಿಸಿದರು.

ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್ ಎಚ್ ಮಾತನಾಡಿ, ‘100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್, ಅಯೋಧ್ಯೆಯ ನಾಗರಿಕರು ಹಾಗೂ ಪ್ರವಾಸಿಗರಿಗೆ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡಲಿದೆ’ ಎಂದರು.

ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಮಾತನಾಡಿ, ‘ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕ್ನ ಹೊಸ ಶಾಖೆಯನ್ನು ಆರಂಭಿಸಿದ್ದಕ್ಕೆ ಹೆಮ್ಮೆ ಇದೆ. ಅಯೋಧ್ಯೆ ಶಾಖೆಯು ನವೀನ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ’ ಎಂದರು.

ಬ್ಯಾಂಕ್ ನಿರ್ದೇಶಕರಾದಎ.ವಿ. ಚಂದ್ರಶೇಖರ್, ದೆಹಲಿ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಬಸವರಾಜ ದೇಸಲ್ಲಿ, ಸಾರ್ವಜನಿಕ ಸಂಪರ್ಕಾಧಿಕಾರಿ ಮಾಧವ ವಿ.ಪಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.