ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಚೆನ್ನಾಗಿ ಮಳೆಯಾಗುತ್ತಿದ್ದು, ಮಂಗಳವಾರವೂ ಮಳೆಯ ಬೋರ್ಗರೆತ ಮುಂದುವರಿದಿದೆ.

ಸೋಮವಾರ ರಾತ್ರಿ ಇಡೀ ಬಿಟ್ಟು ಬಿಟ್ಟು ಮಳೆಯಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದಲೂ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರಾ, ಫಲ್ಗುಣಿ, ಶಾಂಭವಿ ಹಾಗೂ ನಂದಿನಿ ನದಿಗಳು ತುಂಬಿ ಹರಿಯುತ್ತಿವೆ.

ಭಾರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸೋಮವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆಯಲ್ಲಿ 13 ಸೆಂಮೀ, ಮಲವಂತಿಗೆಯಲ್ಲಿ 10 ಸೆಂ.ಮೀ, ಪುತ್ತೂರು ತಾಲ್ಲೂಕಿನ ಬೆಳಂದೂರಿನಲ್ಲಿ 11 ಸೆಂ.ಮೀ, ಎಡಮಂಗಲದಲ್ಲಿ 10 ಸೆಂ.ಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.