ಬಂಟ್ವಾಳ: ಮಕ್ಕಳಿಗೆ ಸಾಹಿತ್ಯದಿಂದ ಜ್ಞಾನ ವೃದ್ಧಿ ಜೊತೆಗೆ ಕಲಿಕೆಗೆ ಪ್ರೇರಣೆಯಾಗುತ್ತದೆ. ಸಾಹಿತ್ಯವು ಶೈಕ್ಷಣಿಕವಾಗಿ ಮಕ್ಕಳನ್ನು ಬಲಿಷ್ಠಗೊಳಿಸುತ್ತದೆ. ಪುಸ್ತಕದ ಓದು ಮಕ್ಕಳ ಸಾಹಿತ್ಯಾಸಕ್ತಿಗೆ ಅಡಿಪಾಯ ಒದಗಿಸುತ್ತದೆ ಎಂದು ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರೇಕ್ಷಾ ಹೇಳಿದರು.

ಇಲ್ಲಿನ ಶಂಭೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾಲೋಕ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳವಾರ ನಡೆದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಡೇಶ್ವಾಲ್ಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸಾನ್ವಿ ಸುವರ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಕನ್ನಡ ಎಲ್ಲರ ಮನದ ಭಾಷೆಯಾಗಿದೆ ಎಂದರು.

ಸಾಹಿತಿ ರಾಮಕೃಷ್ಣ ಭಟ್ ಚೂಂತಾರು ಮಕ್ಕಳ ಸ್ವರಚಿತ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಸಮತೋಲಿತ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಹಿತ್ಯ ಸಮ್ಮೇಳನ ಉತ್ತಮ ವೇದಿಕೆಯಾಗಿದೆ ಎಂದರು.

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಭಾ ಕೆ.ಆರ್. ಶುಭ ಹಾರೈಸಿದರು. ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಶಂಭೂರು ಮೆರವಣಿಗೆ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೇಮಚಂದ್ರ ಭಂಡಾರದಮನೆ ಕನ್ನಡ ಧ್ವಜಾರೋಹಣ ಮತ್ತು ಬಂಟ್ವಾಳ ಕಸಾಪ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.
ಸ್ವಾಗತ ಸಮಿತಿ ಗೌರವಾಧ್ಯಕ್ಷ ಆನಂದ ಎ.ಶಂಭೂರು, ಪ್ರಧಾನ ಕಾರ್ಯದರ್ಶಿ ಮುಖ್ಯ ಶಿಕ್ಷಕ ಜಯರಾಮ ಡಿ.ಪಡ್ರೆ ಇದ್ದರು.

ಮಕ್ಕಳ ಕಲಾಲೋಕ ಅಧ್ಯಕ್ಷ ರಮೇಶ ಎಂ.ಬಾಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಧೃತಿ ಸ್ವಾಗತಿಸಿದರು. ಹರ್ಷಿತಾ ವಂದಿಸಿದರು. ಭಾಗ್ಯಶ್ರೀ ಕೆ. ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.