ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ. 27ರಿಂದ ಡಿ. 12ರವರೆಗೆ ನೆರವೇರಲಿದ್ದು, ನ. 25ರಿಂದ ಡಿ. 12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ.

ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.7)ಯಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27ರಿಂದ ಡಿ.12ರವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.

ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನ.26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯ ಇರುವುದರಿಂದ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.