ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಹಾಗೂ ಕಸ್ವಿ ಹಸಿರು ದಿಬ್ಬಣದ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತೆರೆಯಲಾದ ಶಿಶು ಪೋಷಣಾ ಕೊಠಡಿಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.

ಶಿಶು ಪೋಷಣ ಕೊಠಡಿಯಲ್ಲಿ ತಾಯಿ ತನ್ನ ಮಗುವನ್ನು ಲವಲವಿಕೆಯಿಂದ ಆರೈಕೆ ಮಾಡಬಹುದಾಗಿದೆ. ಕೇಶವ ರಾಮಕುಂಜ ಅವರು ತನ್ನ ಮಗಳ ಹುಟ್ಟುಹಬ್ಬದ ಅಂಗವಾಗಿ ಕಸ್ವಿ ಹಸಿರು ದಿಬ್ಬಣ ವತಿಯಿಂದ ಶಿಶು ಪೋಷಣಾ ಕೊಠಡಿ ತೆರೆದಿರುವುದು ಉತ್ತಮ ಕೆಲಸ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅಧ್ಯಕ್ಷತೆ ವಹಿಸಿದ್ದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ತ್ರಿಮೂರ್ತಿ, ಮಾಂಡೋವಿ ಮೋಟರ್ಸ್ನ ಶಶಿಧರ್ ಕಾರಂತ್, ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಪೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜಾ ವಿ.ಭಟ್, ಹಸಿರು ದಿಬ್ಬಣ ಕಾರ್ಯದರ್ಶಿ ಬಾಬುಗೌಡ ಪದ್ಮಂಜ ಇದ್ದರು.

ಕಸ್ವಿ ಹಸಿರು ದಿಬ್ಬಣದ ಅಧ್ಯಕ್ಷ ಕೇಶವ ರಾಮಕುಂಜ ಸ್ವಾಗತಿಸಿದರು. ಹರ್ಷ ಆರ್.ವಂದಿಸಿದರು. ಸಂತೋಷ್ ಬಿ.ಕೆ.ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.