ಸುಳ್ಯ: ತಾಲ್ಲೂಕಿನಲ್ಲಿ ಮತದಾನಕ್ಕಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸುಳ್ಯ ಕ್ಷೇತ್ರದಲ್ಲಿ ಚುನಾವಣೆಗೆ 233 ಮತಗಟ್ಟೆ ಸಿದ್ಧಪಡಿಸಲಾಗಿದೆ.

ನಕ್ಸಲ್ ಪೀಡಿತ, ಸೂಕ್ಷ್ಮ ಸೇರಿದಂತೆ 18 ಸೂಕ್ಷ್ಮ ಬೂತ್‌ಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಪೊಲೀಸರನ್ನು 18 ಸೆಕ್ಟರ್‌ಗಳಾಗಿ ವಿಂಗಡಿಸಲಾಗಿದೆ. 18 ಸೆಕ್ಟರ್‌ನ ಭದ್ರತಾ ವ್ಯವಸ್ಥೆಯ ಉಸ್ತುವಾರಿಯನ್ನು ಡಿವೈಎಸ್‌ಪಿ ನೋಡಿಕೊಳ್ಳುವರು. ಒಬ್ಬರು ಡಿವೈಎಸ್‌ಪಿ ನೇತೃತ್ವದಲ್ಲಿ 5 ಮಂದಿ ಸಿಪಿಐ, 13 ಪಿಎಸ್‌ಐ ಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. 420 ಪೊಲೀಸ್ ಸಿಬ್ಬಂದಿ, 100 ಮಂದಿ ಕೇಂದ್ರ ಮೀಸಲು ಪೊಲೀಸ್ ಪಡೆ, 42 ರಾಜ್ಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಮೊಬೈಲ್ ಸ್ಕ್ವಾಡ್‌ಗಳು ಕ್ಷೇತ್ರದಾದ್ಯಂತ ನಿರಂತರ ಕಣ್ಗಾವಲು ಇರಿಸಿದೆ. ಗಡಿಯಲ್ಲೂ ಭದ್ರತೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.