ಮಂಗಳೂರು: ಇಲ್ಲಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಅವರು ವೆಲೆನ್ಸಿಯಾದ ‘ಫ್ರೆಡ್ರೋಸ್ ಎನ್ಕ್ಲೇವ್’ ವಸತಿ ಸಮುಚ್ಚಯದಲ್ಲಿ ಹೊಂದಿರುವ ಮನೆ ಹಾಗೂ ನಗರದ ಮಲ್ಲಿಕಟ್ಟೆಯ ಜುಗುಲ್ ಟವರ್ಸ್ ಕಟ್ಟಡದಲ್ಲಿರುವ ಅವರ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.

‘ನಗದು ಹಾಗೂ ಚಿನ್ನಾಭರಣಗಳು ದಾಳಿ ವೇಳೆ ಪತ್ತೆಯಾಗಿವೆ. ಅವರು ಕೆಲವು ಕಡೆ ಆಸ್ತಿಗಳನ್ನು ಹೊಂದಿರುವ ವಿವರಗಳು ಸಿಕ್ಕಿವೆ’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ’ಪ್ರಜಾವಾಣಿ‘ಗೆ ತಿಳಿಸಿವೆ.

ಪತ್ತೆಯಾದ ನಗದು ಹಾಗೂ ಚಿನ್ನಾಭರಣ ಹಾಗೂ ಆಸ್ತಿಗಳ ವಿವರಗಳನ್ನು ಲೋಕಾಯುಕ್ತ ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

‘ಕೃಷ್ಣವೇಣಿಯವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾಗ ಅವರ ವಿರುದ್ಧ ಆದಾಯಕ್ಕಿಂತೆ ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ದೂರು ದಾಖಲಾಗಿತ್ತು. ಇದರ ಆಧಾರದಲ್ಲಿ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.