ಉಜಿರೆ (ದಕ್ಷಿಣ ಕನ್ನಡ): ‘ಭಕ್ತಿ ಮತ್ತು ಧರ್ಮಕ್ಕಿಂತಲೂ ಪರಸ್ಪರ ಪ್ರೀತಿ ಮತ್ತು ವಿಶ್ವಾಸವೇ ಮುಖ್ಯ. ಪ್ರಯತ್ನ, ಪ್ರಾರ್ಥನೆ ಮತ್ತು ಪ್ರಾಮಾಣಿಕತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ’ ಎಂದು ಕಂಚಿ ಕಾಮಕೋಟಿ ಪೀಠಾಧಿಪತಿ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ ಗುರುವಾರ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ, ಆಸನ ಸೌಲಭ್ಯವುಳ್ಳ ವಿಸ್ತೃತ ಭೋಜನಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳದ ಅನ್ನದಾನ ಮತ್ತು ನ್ಯಾಯದಾನ ಪದ್ಧತಿಯನ್ನು ಶ್ಲಾಘಿಸಿದ ಶ್ರೀಗಳು, ಕೇರಳದಲ್ಲಿ ಅಭಿಮಾನ,
ತಮಿಳುನಾಡಿನಲ್ಲಿ ಅಧ್ಯಯನ, ಆಂಧ್ರದಲ್ಲಿ ಆಚಾರ ಮತ್ತು ಕರ್ನಾಟಕದಲ್ಲಿ ಅನ್ನದಾನ ಶ್ರೇಷ್ಠವಾಗಿದೆ ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ‘ಮಲೆನಾಡು ರತ್ನ’ ಬಿರುದು ನೀಡಿ ಸ್ವಾಮೀಜಿ ಗೌರವಿಸಿದರು.

ಕಾಸರಗೋಡು ಎಡನೀರು ಮಠದ ಸಚ್ಚಿದಾನಂದ ಸ್ವಾಮೀಜಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಡಿ. ಸುರೇಂದ್ರ ಕುಮಾರ್ ಇದ್ದರು. ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಸಾದ್ ವಂದಿಸಿದರು. ಶ್ರೀಧರ ಭಟ್ ಮತ್ತು ಸುನಿಲ್ ಪಂಡಿತ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.