ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಉರುವಾಲು ಗ್ರಾಮದ ಕಲ್ಪನೆಯ ಸಂಜೀವ ನಾಯ್ಕನಿಗೆ (57) ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ಪೊಕ್ಸೊ) ತ್ವರಿತಗತಿ ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.

‘ಸಂಜೀವ ನಾಯ್ಕನು 4 ವರ್ಷ 5 ತಿಂಗಳ ಬಾಲಕಿಯ ಗುಪ್ತಾಂಗಕ್ಕೆ ಬೆರಳನ್ನು ಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಸಂತ್ರಸ್ತ ಬಾಲಕಿಯ ತಾಯಿ ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ಆಗ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ರವಿ ಬಿ. ಎನ್. ಅವರು ಪ್ರಕರಣದ ತನಿಖೆ ಪೂರ್ಣಗೊಳಿಸಿ ಸಂಜೀವ ನಾಯ್ಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಒಟ್ಟು 9 ಸಾಕ್ಷಿದಾರರ ವಿಚಾರಣೆಗೆ ಒಳಪಡಿಸಲಾಗಿತ್ತು. 21 ದಾಖಲೆಗಳನ್ನು ಗುರುತಿಸಲಾಗಿತ್ತು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ಪೊಕ್ಸೊ) ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ. ಎಸ್. ಅವರು ಸಂಜೀವ ನಾಯ್ಕನಿಗೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್ 8ರ ಅನ್ವಯ 3 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.

ಅಪರಾಧಿಯು ಸಂತ್ರಸ್ತ ಬಾಲಕಿಗೆ ₹ 10 ಸಾವಿರ ದಂಡ ಪಾವತಿಸಬೇಕು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿ ಬಾಲಕಿಗೆ ಹೆಚ್ಚುವರಿಯಾಗಿ ₹ 25 ಸಾವಿರ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ಅವರು ಸಾಕ್ಷಿದಾರರ ವಿಚಾರಣೆ ನಡೆಸಿ, ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.