ಮಂಗಳೂರು: ರಾತ್ರಿ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕಾಗಿ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲೀಕರ ಮೇಲೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.

ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 78 ವಾಹನ ಮಾಲೀಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ 10 ಗಂಟೆಗೆ ಅಂಗಡಿ, ಹೋಟೆಲ್‌ಗಳನ್ನು ಬಂದ್ ಮಾಡಿದರೆ, ಹೊಟೇಲ್ ಮಾಲೀಕರು, ಸಿಬ್ಬಂದಿ, ಅಂಗಡಿ ಮಾಲೀಕರು, ಸಿಬ್ಬಂದಿ ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಹಾಗೆಯೇ ಪಾಲಿಕೆ ವ್ಯಾಪ್ತಿಯಲ್ಲಿ 49 ಹಾಗೂ ಹೊರಗಡೆ 4 ಸೇರಿ ಒಟ್ಟು 54 ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ಹೇಳಿದರು.

ಹವಾಮಾನ ವೈಪರೀತ್ಯ: ಕೊಚ್ಚಿಯಲ್ಲಿ ಇಳಿದ ದುಬೈ ವಿಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.