ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು ಜಂಕ್ಷನ್ - ಯಶವಂತಪುರ ರೈಲಿನ ಸಮಯ ಬದಲು

Published : 1 ಆಗಸ್ಟ್ 2024, 10:05 IST
Last Updated : 1 ಆಗಸ್ಟ್ 2024, 10:05 IST
ಫಾಲೋ ಮಾಡಿ
Comments

ಮಂಗಳೂರು: ಮಂಗಳೂರು ಜಂಕ್ಷನ್-ಯಶವಂತಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 16576ರ ಸಮಯವನ್ನು ಬದಲಾಯಿಸಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಈ ಬಗ್ಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು.

'ರೈಲ್ವೆ ಸಚಿವಾಲಯವು ತಂದಿರುವ ಈ ಬದಲಾವಣೆಯಿಂದ ಮಂಗಳೂರು - ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ' ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.

ಬಹು ಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣಿಕರ ಈ ಬೇಡಿಕೆಯನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.‌ ಸೋಮಣ್ಣ ಅವರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT