ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ಎಟಿಎಂಗೆ ಹಾನಿ ಮಾಡಿ, ಅದರಲ್ಲಿದ್ದ ಹಣವನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂಗೆ ಹಾನಿ ಮಾಡಿದ ಕೊಪ್ಪಳ ಜಿಲ್ಲೆಯ ಬಾಚನಳ್ಳಿಯ ಬೀರಪ್ಪ ಎಂಬಾತನನ್ನು ಬಂಧಿಸಲಾಗಿದೆ.

ನಸುಕಿನ ಜಾವ ಸುಮಾರು 2 ಗಂಟೆ ವೇಳೆಗೆ ಎಟಿಎಂಗೆ ನುಗ್ಗಿದ ಆರೋಪಿ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ. ಆದರೆ ಎಟಿಎಂ ಯಂತ್ರದಿಂದ ಹಣ ಹೊರಬಂದಿಲ್ಲ.

ಈತನ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ವೇಳೆ ಬ್ಯಾಂಕ್ ಎಟಿಎಂ ಕಣ್ಗಾವಲು ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಟಿಎಂನಿಂದ ನಗದು ಕಳವು ಮಾಡಿಲ್ಲ, ಆದರೆ ಕಳವು ಯತ್ನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.