ಮಂಗಳೂರು: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅನುಮತಿ ನೀಡಿರುವುದನ್ನು ವಿರೋಧಿಸಿ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು.

ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೊರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ ನಡೆಸಿದರು.

ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಎಲೆಕ್ಟ್ರಿಕ್ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚಾರಕ್ಕೆ ಅನುಮತಿ ನೀಡಿರುವ ಜಿಲ್ಲಾಧಿಕಾರಿ ಆದೇಶವು ಏಕಪಕ್ಷೀಯವಾಗಿದೆ. ಈ ಆದೇಶ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯಲಿದೆ ಎಂದರು.

ಈ ಆದೇಶವು ಹೊಟ್ಟೆಪಾಡಿಗಾಗಿ ದುಡಿಯುವ ರಿಕ್ಷಾ ಚಾಲಕರ ಬದುಕಿಗೆ ಕೊಳ್ಳಿ ಇಟ್ಟಂತೆ ಆಗಿದೆ. ಡಿಸಿ ಸ್ಥಳಕ್ಕೆ ಬರಬೇಕು ಅಥವಾ ಅವರು ಅಧಿಕೃತ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದರು.

ಇದು ಕೇಂದ್ರ ಸರ್ಕಾರದ ತೀರ್ಮಾನ ಎಂದು ಅಧಿಕಾರಿಗಳು ಹೇಳುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಈ ಆದೇಶ ಹೊರಡಿಸಲಾಗಿದೆ. ಪಕ್ಕದ ಉಡುಪಿಯಲ್ಲಿ ಇದು ಅನುಷ್ಠಾನ ಗೊಂಡಿಲ್ಲ. ಜಿಲ್ಲಾಡಳಿತ ಎಲೆಕ್ಟ್ರಿಕ್ ಕಂಪನಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಸಂಘಟನೆ ಪ್ರಮುಖರಾದ ಅಶೋಕ ಶೆಟ್ಟಿ, ಭರತ್, ಮುಹಮ್ಮದ್ ಅನ್ಸಾರ್, ಲೋಕೇಶ್ ಬಲ್ಲಾಳ್ ಬಾಗ್ ಮತ್ತಿತರರು ಇದ್ದರು.

ಚಾಲಕರು ರಿಕ್ಷಾ ಸಂಚಾರ ಬಂದ್ ಮಾಡಿ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಎಲೆಕ್ಟ್ರಿಕ್ ರಿಕ್ಷಾಗಳು ವಿರಳ ಸಂಖ್ಯೆಯಲ್ಲಿ ಸಂಚರಿಸುತ್ತಿರುವುದು ಕಂಡು ಬಂತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.