ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಪ್ರೊ. ಧರ್ಮ ಅವರು ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿದ್ದಾರೆ. ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಈ ಹಿಂದೆ ಇದೇ ವಿಶ್ವದ್ಯಾಲಯದ ಕುಲಸಚಿವರಾಗಿಯೂ (ಮೌಲ್ಯಮಾಪನ) ಕರ್ತವ್ಯ ನಿರ್ವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ ಅವರಿಗೆ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಅವರು ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕುಲಪತಿಯಾಗಿದ್ದ ಪ್ರೊ.ಪಿಎಸ್. ಯಡಪಡಿತ್ತಾಯ ಅವರ ಅವಧಿ 2023ರ ಜೂನ್ 2ಕ್ಕೆ ಕೊನೆಗೊಂಡಿತ್ತು. ಆ ಬಳಿ ವಿಶ್ವವಿದ್ಯಾಲಯದ ಅತ್ಯಂತ ಹಿರಿಯ ಡೀನ್ ಆಗಿದ್ದ ಪ್ರೊ.ಜಯರಾಜ್ ಅಮೀನ್ ಅವರನ್ನು ಹಂಗಾಮಿ ಕುಲಪತಿಯನ್ನಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.