ಮಂಗಳೂರು: ‘ಬೈಕಾಡಿಯವರು ಅವಕಾಶ ವಂಚಿತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಶಿಕ್ಷಕರಾಗಿದ್ದರು’ ಎಂದು ಶಾಸಕ ವೇದವ್ಯಾಸ ಕಾಮತ್ ಈಚೆಗೆ ಅಗಲಿದ ತಮ್ಮ ಗುರುಗಳನ್ನು ಸ್ಮರಿಸಿಕೊಂಡರು.

ನಗರದ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ನಡೆದ ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ನುಡಿನಮನದಲ್ಲಿ ಅವರು ಮಾತನಾಡಿದರು.

ಕಾಳಿಕಾಂಬಾ ವಿನಾಯಕ ದೇವಸ್ಥಾನ, ವಿಶ್ವಕರ್ಮ ಸಹಕಾರ ಬ್ಯಾಂಕ್, ಎಸ್.ಕೆ.ಜಿ.ಐ. ಸೊಸೈಟಿ, ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಯುವ ವೇದಿಕೆ, ವಿಶ್ವಕರ್ಮ ಯುವ ಮಿಲನ, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಸಹಯೋಗದಲ್ಲಿ ನುಡಿನಮನ ಹಮ್ಮಿಕೊಳ್ಳಲಾಗಿತ್ತು.

‘ಅವರು ಕೇವಲ ಬೋಧನೆ ಮಾಡುವ ಶಿಕ್ಷಕರಾಗಿರಲಿಲ್ಲ. ವಿದ್ಯಾರ್ಥಿ ವ್ಯಕ್ತಿತ್ವ ವಿಕಸನಕ್ಕೆ ಪ್ರಯತ್ನಿಸುತ್ತಿದ್ದರು. ಅಲ್ಲದೇ, ಸದಾ ಸರಳ ಹಸನ್ಮುಖಿ, ಸ್ನೇಹಜೀವಿಯಾಗಿದ್ದು ಶಿಕ್ಷಣ, ಸಾಮಾಜಿಕ, ಧಾರ್ಮಿಕ, ನಾಟಕ, ಸಾಹಿತ್ಯ, ಪತ್ರಿಕಾ ಕ್ಷೇತ್ರಕ್ಕೆ ಅನನ್ಯ ಕೊಡುಗೆ ಸಲ್ಲಿಸಿದರು’ ಎಂದು ಶಾಸಕರು ಸ್ಮರಿಸಿಕೊಂಡರು.

ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಎಸ್. ಪಿ .ಗುರುದಾಸ್ ಬೈಕಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಹರೀಶ್ ಆಚಾರ್, ಎಸ್.ಕೆ.ಜಿ.ಐ. ಸೊಸೈಟಿ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್, ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮೊಕ್ತೇಸರರಾದಕೆ. ಕೇಶವ ಆಚಾರ್ಯ, ಸುಂದರ ಆಚಾರ್ಯ ಬೆಳುವಾಯಿ ಮತ್ತು ಎ. ಲೋಕೇಶ್ ಆಚಾರ್ಯ ಬಿಜೈ, ಪಶುಪತಿ ಉಳ್ಳಾಲ್, ಎಸ್. ವಿ ಆಚಾರ್, ಸತೀಶ್ ರಾವ್ ಬೆಳ್ಳೂರು, ಸುರೇಶ್ ಆಚಾರ್ಯ ದೇರಳಕಟ್ಟೆ, ಟಿ. ಶಾಂತಾರಾಂ, ಪಿ. ರವೀಂದ್ರ ಮಂಗಳಾದೇವಿ, ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಕೆ.ಎಲ್.ಹರೀಶ್, ಮ. ಯೋಗೀಶ್ ಆಚಾರ್, ಸುಜೀರ್ ವಿನೋದ್ ನುಡಿ ನಮನ ಸಲ್ಲಿಸಿದರು. ಪುತ್ರ ಭರತ್ ಬೈಕಾಡಿ ಜನಾರ್ದನ ಆಚಾರ್ ಅವರ ಮಾರ್ಗದರ್ಶನವನ್ನು ನೆನಪಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.