ಬಂಟ್ವಾಳ: ‘ದೇಶದ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ’ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬ ಪ್ರಯುಕ್ತ ಇಲ್ಲಿನ ಬಿಜೆಪಿ ಯುವ ಮೋರ್ಚಾ ಬಿ.ಸಿ. ರೋಡಿನಲ್ಲಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪ್ರಮುಖರಾದ ಸುಲೋಚನಾ ಜಿ.ಕೆ. ಭಟ್, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು ಇದ್ದರು.

ಕೆಎಂಸಿ ಆಸ್ಪತ್ರೆ ರಕ್ತ ನಿಧಿ ಡಾ.ಐಶ್ವರ್ಯ ತೇಜ, ವೆನ್ಲಾಕ್ ಆಸ್ಪತ್ರೆ ಟ್ರಾನ್ಸ್ ಪ್ಲಾಂಟ್ ಸಂಯೋಜಕಿ ಪದ್ಮಾ ವೇಣೂರು ಮಾಹಿತಿ ನೀಡಿದರು.

ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಬಾಳಿಕೆ ಸ್ವಾಗತಿಸಿ, ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.