ಮಂಗಳೂರು: ‘ಮುಂಬರುವವಿಧಾನಸಭಾಚುನಾವಣೆಯಲ್ಲಿಪಕ್ಷದಲ್ಲಿಯುವ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ಗಿಟ್ಟಿಸುವನಿರೀಕ್ಷೆಇದೆ’ ಎಂದುಕರ್ನಾಟಕಪ್ರದೇಶಯುವಕಾಂಗ್ರೆಸ್ಸಮಿತಿಅಧ್ಯಕ್ಷಮೊಹಮ್ಮದ್ನಲಪಾಡ್ ತಿಳಿಸಿದರು.

'ಯುವಜನರ ಜೋಡಿಸಿ, ಭಾರತವನ್ನು ಜೋಡಿಸಿ' ಅಭಿಯಾನದ ಅಂಗವಾಗಿ ನಗರಕ್ಕೆ ಸೋಮವಾರ ಭೇಟಿ ನೀಡಿದ್ದ ವೇಳೆ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಟಿಕೆಟ್ ಹಂಚಿಕೆ ವೇಳೆ ಯುವ ನಾಯಕರಿಗೆ ಆದ್ಯತೆ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಈ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಯುವ ನಾಯಕರಿಗೆ ಆದ್ಯತೆ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

ಡಿ.ಕೆ.ಶಿವಕುಮಾರ್ ಹಾಗೂ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ನಡುವಿನ ತಿಕ್ಕಾಟದ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನನ್ನು ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಿಸಿದ್ದು ಕೆಪಿಸಿಸಿ ಅಧ್ಯಕ್ಷರು. ಡಿ.ಕೆ.ಶಿವಕುಮಾರ್ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ಬಹುಮತ ಗಳಿಸುವ ವಿಶ್ವಾಸ ಇದೆ’ ಎಂದರು.

‘ರಾಜ್ಯದಲ್ಲಿ ಯುವ ಕಾಂಗ್ರೆಸ್ನಲ್ಲಿ ಒಳಜಗಳವಿಲ್ಲ. ಭಿನ್ನಾಭಿಪ್ರಾಯಗಳಿರುವುದು ಸಹಜ. ಆದರು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.