ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಗಾಲ್ಫ್ಕೋರ್ಸ್ ಜಾಗದಲ್ಲಿ 300ಕ್ಕೂ ಹೆಚ್ಚು ಮರಗಳನ್ನು ಅನುಮತಿ ಪಡೆಯದೆಯೇ ತೆರವುಗೊಳಿಸಲಾಗಿದ್ದು, ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಲ್ಫ್ ಕೋರ್ಸ್ನ ಜಾಗದಲ್ಲಿ ಜೆಸಿಬಿ ಬಳಸಿ ಮರಗಳನ್ನು ಉರುಳಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ (ಎನ್ಇಸಿಎಫ್) ಸ್ವಯಂಸೇವಕರು ಸ್ಥಳಕ್ಕೆ ಧಾವಿಸಿದ್ದರು. ಯಾವುದೇ ಅನುಮತಿ ಪಡೆಯದೆಯೇ ಮರಗಳನ್ನು ಕಡಿಯುತ್ತಿರುವುದನ್ನು ಗಮನಿಸಿ ಅವರು ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳೆಗಾರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರಗಳನ್ನು ಉರುಳಿಸಲು ಬಳಸಿದ್ದ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳನ್ನು ವಶಕ್ಕೆ ಪಡೆದರು.

‘ಇಲ್ಲಿ ಉರುಳಿಸಿರುವ ಮರಗಳ ಮಹಜರು ನಡೆಯುತ್ತಿದೆ. 300ಕ್ಕೂ ಹೆಚ್ಚು ಮರಗಳನ್ನು ಉರುಳಿಸಿರುವುದು ಗಮನಕ್ಕೆ ಬಂದಿದೆ. ಇವುಗಳಲ್ಲಿ ಹೆಚ್ಚಿನವು ಅಕೇಶಿಯಾ ಪ್ರಭೇದದವು. ಮಹಜರು ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಯಾವ ಜಾತಿಯ ಎಷ್ಟು ಮರಗಳನ್ನು ಉರುಳಿಸಲಾಗಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ’ ಎಂದು ಆರ್ಎಫ್ಒ ರಾಜೇಶ್ ಬಳೆಗಾರ್ ’ಪ್ರಜಾವಾಣಿ‘ಗೆ ತಿಳಿಸಿದರು.

‘ಗಾಲ್ಫ್ಕೋರ್ಸ್ನವರು ಇಲ್ಲಿನ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡುವಂತೆ ಇಲಾಖೆ ಅರ್ಜಿ ಸಲ್ಲಿಸಿದ್ದರು. ಆದರೆ, ನಾವು ಇನ್ನೂ ಅನುಮತಿ ನೀಡಿಲ್ಲ. ಅಷ್ಟರಲ್ಲಿ ಮರಗಳನ್ನು ತೆರವುಗೊಳಿಸಿದ್ದಾರೆ. ಈ ಕೃತ್ಯ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.

ಈ ಕುರಿತು ಪ್ರತಿಕ್ರಿಯಿಸಿದ ಎನ್ಇಸಿಎಫ್ ಸ್ವಯಂಸೇವಕ ಹರೀಶ್, ‘ನಾವು ದೂರು ನೀಡಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅನುಮತಿ ಇಲ್ಲದೆಯೇ ಮರಗಳನ್ನು ಕಡಿದವರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡುತ್ತೇವೆ. ನಗರದ ಹಸಿರು ಸಂರಕ್ಷಣೆ ವಿಚಾರದಲ್ಲಿ ನಮ್ಮ ಹೋರಾಟ ಸದಾ ಮುಂದುವರಿಯಲಿದೆ’ ಎಂದು ತಿಳಿಸಿದರು.

ಮರ ತೆರವಿನ ಕುರಿತು ಎನ್ಇಸಿಎಫ್ ಸ್ವಯಂಸೇವಕರಿಂದ ದೂರು ತೆರವುಗೊಳಿಸಿರುವ ಬಹುತೇಕ ಮರಗಳು ಅಕೇಶಿಯಾ ಪ್ರಬೇಧದವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.