ಮಂಗಳೂರು: ನಗರದ ನಂತೂರು ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ದಟ್ಟಣೆ ಸಮಸ್ಯೆ ಎದುರಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚಿಸಿದರು.

ನಂತೂರಿನಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯ ಪೂರ್ವ ತಯಾರಿಯನ್ನು ಅವರು ಗುರುವಾರ ಪರಿಶೀಲಿಸಿದರು. ಕಾಮಗಾರಿ ಸಲುವಾಗಿ ಜಮೀನು ಬಿಟ್ಟು ಕೊಟ್ಟಿರುವ ಸ್ಥಳೀಯರ ಮನೆಗೆ ಭೇಟಿ ನೀಡಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಂತೂರು ವೃತ್ತದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಆಗಬೇಕೆಂಬುದು ನಗರದ ಜನರ ಹಲವು ವರ್ಷಗಳ ಬೇಡಿಕೆ. ಇಲ್ಲಿ ರಸ್ತೆ ವಿಸ್ತರಣೆಗೆ ಸಿದ್ಧತೆ ನಡೆದಿದ್ದು, ಮಣ್ಣು ತೆರವು ಕಾರ್ಯ ಆರಂಭಗೊಂಡಿದೆ. ಆದರೆ, ಈ ಪ್ರದೇಶದಲ್ಲಿ ನಿತ್ಯವೂ ವಾಹನ ದಟ್ಟಣೆಯಿಂದಾಗಿ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಇಲ್ಲಿ ಮೇಲ್ಸೇತುವೆ ನಿರ್ಮಾಣದ ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವುದಕ್ಕೂ ಮೊದಲು ಸಂಚಾರ ದಟ್ಟಣೆ ಸಮಸ್ಯೆ ಉಂಟಾಗುವುದನ್ನು ತಡೆಯಲು ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂಬ ಕುರಿತು ಭಾರತೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಗೂ ಪಾಲಿಕೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕೆಲ ಸಲಹೆಗಳನ್ನು ನೀಡಿದರು.

ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಜಾವೆದ್ ಆಜ್ಮಿ ಜೊತೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.