ಮೂಡುಬಿದಿರೆ:ಮಿಜಾರಿನಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಆಳ್ವಾಸ್ ಕಾಲೇಜು ವಿದ್ಯಾರ್ಥಿ, ಎಡಪದವು ನಿವಾಸಿ ಕಾರ್ತಿಕ್ ಆಚಾರ್ಯ ಎಂಬುವರು ಮೃತಪಟ್ಟಿದ್ದು, ಘಟನೆಯನ್ನು ಖಂಡಿಸಿ ಬುಧವಾರ ಬೆಳಿಗ್ಗೆ ಎಡಪದವುನಲ್ಲಿ ವಿವಿಧ ಸಂಘಟನೆಗಳ ಸದಸ್ಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಮಿಜಾರು- ಎಡಪದವು ನಾಗರಿಕ ಹಿತರಕ್ಷಣಾ ವೇದಿಕೆಯ ಸಂಚಾಲಕ ಸುಧಾಕರ ಪೂಂಜಾ ಮಾತನಾಡಿ, ‘ಖಾಸಗಿ ಬಸ್‌ಗಳ ಅಬ್ಬರಿಂದ ಮಂಗಳೂರು-ಮೂಡುಬಿದಿರೆ ರಸ್ತೆ ಮಧ್ಯೆ ನಿತ್ಯ ಅಪಘಾತಗಳಾಗುತ್ತಿದೆ. ಕೆಲವು ಬಸ್ ಮಾಲಿಕರು ಚಾಲಕರು ಮತ್ತು ನಿರ್ವಾಹಕರಿಗೆ ಕಲೆಕ್ಷನ್ ಟಾರ್ಗೆಟ್ ನೀಡುತ್ತಿರುವುದರಿಂದ ಬಸ್‌ಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತಿವೆ. ಸಂಚಾರ ನಿಯಮ ಉಲ್ಲಂಘಿಸುವುದು ಸಾಮಾನ್ಯವಾಗಿದೆ. ಇಂತಹ ಬಸ್‌ಗಳು ಮತ್ತು ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಮಾತನಾಡಿ, ‘ಈ ಕುರಿತು ಆರ್‌ಟಿಒ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಒದಗಿಸುವ ಕುರಿತು ಜಿಲ್ಲಾಧಿಕಾರಿ ಜತೆಗೆ ಚರ್ಚಿಸುತ್ತೇನೆ’ ಎಂದರು.

ಎಡಪದವು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಕುಮಾರ ದೇವಾಡಿಗ, ರಿಕ್ಷಾ ಮಾಲಕ ಚಾಲಕರ ಸಂಘದ ಅಧ್ಯಕ್ಷ ಆನಂದ ದೇವಾಡಿಗ, ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಆಚಾರ್ಯ ಇದ್ದರು. ಪ್ರತಿಭಟನೆಯಿಂದಾಗಿ ಮೂಡುಬಿದಿರೆ-ಮಂಗಳೂರು ರಸ್ತೆ ಮಧ್ಯೆ ಸುಮಾರು ಅರ್ಧ ಗಂಟೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.