ಉಳ್ಳಾಲ (ದಕ್ಷಿಣ ಕನ್ನಡ): ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ಆತನ ಮನೆ ಎದುರುಗಡೆಯೇ ಶುಕ್ರವಾರ ತಡರಾತ್ರಿ ವೇಳೆ ಸಂಭವಿಸಿದೆ.

ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಹಲ್ಲೆಗೆ ಒಳಗಾದವರು. ಗಾಯಾಳುವನ್ನು ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. 'ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಜಿಕ್ ಎಂಬವರು ಇನ್ನಿಬ್ಬರ ಜೊತೆ ಸೇರಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ ಎಂಬುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಹೊರಗಡೆಗೆ ಕರೆಯಿಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ.

ತಕ್ಷಣ ಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯವಿತ್ತು. ಕೆಲ ತಿಂಗಳುಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಒಬ್ಬನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆಯನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶಾಸಕ ಯು.ಟಿ ಖಾದರ್ ಆಸ್ಪತ್ರೆ ಭೇಟಿ
ತಡರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಯು.ಟಿ ಖಾದರ್ ಅವರು ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ವಿವರ ಪಡೆದುಕೊಂಡಿದ್ದಾರೆ. ತಕ್ಷಣವೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದರು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.