ಮಂಗಳೂರು: ‘ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈಚೆಗೆ ‘ಅಪಶಕುನ’ ಎಂದು ಹೇಳಿಕೆ ನೀಡಿದ್ದಕ್ಕೆ, ನಳಿನ್ ಕುಮಾರ್ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಮುಂದಿಟ್ಟುಕೊಂಡು ಪ್ರತಿಕ್ರಿಯಿಸಿದ್ದಾರೆ.

ಇಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಪಂಚ ರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್ ಫೈನಲ್ ಪ್ರವೇಶಿಸಲು ವಿಫಲವಾಗಿದೆ ಎನ್ನುವುದನ್ನು ಈ ಫಲಿತಾಂಶ ದೃಢಪಡಿಸಿದೆ’ ಎಂದರು.

‘ವಿಧಾನಸಭಾ ಚುನಾವಣೆ ನಡೆದ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮೋದಿ ಅವರ ನಾಯಕತ್ವದಲ್ಲಿ ಜನ ವಿಶ್ವಾಸವಿಟ್ಟಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಜಯಭೇರಿ ಬಾರಿಸಲು ಈ ಮೂರು ರಾಜ್ಯಗಳಲ್ಲಿ ಸಿಕ್ಕಿರುವ ಗೆಲುವು ಹೆಚ್ಚಿನ ಶಕ್ತಿ ನೀಡಲಿದೆ. ವಿರೋಧ ಪಕ್ಷಗಳ ಅನುಕೂಲಕರ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ’ ಎಂದು ನಳಿನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.