ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕಾಗಿ ದೇಗುಲದ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ದೇಶ, ವಿದೇಶಗಳಿಂದ ಉತ್ಸವದಲ್ಲಿ ಪಾಲ್ಗೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಸೆ.29 ರಿಂದ ಪ್ರಾರಂಭಗೊಂಡಿರುವ ನವರಾತ್ರಿಯ ಉತ್ಸವದ ಆಚರಣೆಗಳು ಅ.08 ರವರೆಗೂ ನಡೆಯಲಿದೆ. ನವರಾತ್ರಿಯ ಅಂಗವಾಗಿ ದೆವಸ್ಥಾನದಲ್ಲಿ ದಿನಂಪ್ರತಿ ನಡೆಯುವ ಕಟ್ಟಕಟ್ಟಳೆ ಪೂಜೆಗಳ ಜತೆಯಲ್ಲಿ ನವರಾತ್ರಿಯ ವಿಶೆಷ ಪೂಜೆ ಹಾಗೂ ಉತ್ಸವಗಳು ನಡೆಯಲಿದೆ. ಅ.7 ರಂದು ಸೋಮವಾರ ಮಹಾ ನವಮಿಯ ಪ್ರಯುಕ್ತ ಬೆಳಿಗ್ಗೆ 11.30 ಕ್ಕೆ ಚಂಡಿಕಾಯಾಗ ಹಾಗೂ ಮಧ್ಯಾಹ್ನ 1.50 ಕ್ಕೆ ರಥೋತ್ಸವ ಜರುಗಲಿದೆ.

ಅ.08 ರಂದು ವಿಜಯದಶಮಿಯ ಪ್ರಯುಕ್ತ ಬೆಳಿಗ್ಗೆ ವಿದ್ಯಾರಂಭ, ನವಾನ್ನ ಪ್ರಾಶನ ಹಾಗೂ ಸಂಜೆ 5.30ಕ್ಕೆ ಶ್ರೀ ಮೂಕಾಂಬಿಕಾ ದೇವಿಯ ವಿಜಯೋತ್ಸವ ನಡೆಯಲಿದೆ. ಉತ್ಸವ ಆಚರಣೆಯ ಅಂಗವಾಗಿ ಪ್ರತಿ ದಿನ ಅಪರಾಹ್ನ 3.00 ಗಂಟೆಯಿಂದ ರಾತ್ರಿ 11ರ ವರೆಗೆ ದೇಶದ ವಿವಿಧ ಭಾಗದ ಕಲಾ ತಂಡಗಳಿಂದ ಸೇವಾರೂಪವಾಗಿ ಶ್ರೀ ದೇವಳದ ಸ್ವರ್ಣಮುಖಿ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕ್ಷೇತ್ರಕ್ಕಾಗಮಿಸುವ ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ಹಲವು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಸತಿ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ. ದಿನದ 24 ಗಂಟೆ ಉಚಿತ ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರದ ಸೌಲಭ್ಯ ಕಲ್ಪಿಸಲಾಗಿದೆ. ರೈಲಿನಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಉಡುಪಿ, ಕುಂದಾಪುರ, ಬೈಂದೂರು ರೈಲ್ವೆ ನಿಲ್ದಾಣದಿಂದ ಕೊಲ್ಲೂರಿಗೆ ನಿರಂತರವಾಗಿ ನೇರ ಬಸ್ ಸೇವೆಯನ್ನು ಕಲ್ಪಿಸಲು ಸಂಬಂಧಿತರಿಗೆ ಮಾಹಿತಿ ನೀಡಲಾಗಿದೆ.

ಭಕ್ತರ ವಾಹನ ನಿಲುಗಡೆಗಾಗಿ ಈಗ ಇರುವ ವಾಹನ ಪಾರ್ಕಿಂಗ್ ಸ್ಥಳದ ಜೊತೆಗೆ ಹೆಚ್ಚುವರಿಯಾಗಿ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ನವರಾತ್ರಿ ಹಾಗೂ ದಶಮಿ ಉತ್ಸವದ ಆಚರಣೆಗಾಗಿ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗಾಗಿ ವಿಶೇಷ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ ಎಂ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್.ಕೃಷ್ಣಮೂರ್ತಿಯವರು ಪ್ರತಿ ದಿವಸ ಶ್ರೀ ದೇವಳದ ದಾಸೋಹ ಭವನದಲ್ಲಿ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ದೀಪಾಲಂಕಾರ: ನವರಾತ್ರಿ ಸಂಭ್ರವದ ಅಂಗವಾಗಿ ದೇವಸ್ಥಾನಕ್ಕೆ ವಿದ್ಯುತ್ ದೀಪ ಹಾಗೂ ಹೂವಿನ ಅಲಂಕಾರ ಮಾಡಲಾಗಿದ್ದು, ಸಂಜೆಯ ಬಳಿಕ ದೇವಸ್ಥಾನದ ವಿದ್ಯುತ್ ಅಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.