ಮಂಗಳೂರು: ಗೋಲಿಬಾರ್ನಲ್ಲಿ ಮೃತಪಟ್ಟವರು ಅಪರಾಧಿಗಳು ಎಂಬ ಶಂಕೆ ವ್ಯಕ್ತವಾಗಿರುವುದರಿಂದ ಅವರಿಗೆ ಪರಿಹಾರ ಕೊಡುವ ಬಗ್ಗೆ ತನಿಖೆಯ ನಂತರವೇ ರಾಜ್ಯ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದುಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನಗರದ ಸರ್ಕೀಟ್ ಹೌಸ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಅಪರಾಧಿಗಳು ಎಂದು ಸಾಬೀತಾದರೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದರು.

ಈ ಹಿಂದೆ ಯಡಿಯೂರಪ್ಪ, ‘ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ₹ 10 ಲಕ್ಷ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಹೇಳಿದ್ದರು.

ಬಸವರಾಜ್ ಬೊಮ್ಮಾಯಿ ಮಾತನಾಡಿ, ‘ವಿವಿಧ ಸಮುದಾಯಗಳ ನಾಯಕರೊಂದಿಗೆ ಸಂಪರ್ಕದಲ್ಲಿರಿ.ಕಾನೂನು ಸುವ್ಯವಸ್ಥೆ ಕಾಪಾಡಲು ಗಮನ ಕೊಡಿ’ ಎಂದು ಪೊಲೀಸರಿಗೆ ಸೂಚಿಸಿದ್ದೇವೆ ಎಂದರು.

‘ಮಂಗಳೂರಿನಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಪರಿಸ್ಥಿತಿ ನಿರ್ವಹಿಸಲು ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದಾರೆ. ಅವರಿಗೆನಮ್ಮ ಬೆಂಬಲ ಇದೆ. ಇನ್ಸ್ಪೆಕ್ಟರ್ ಅಮಾನತು ಮಾಡಬೇಕು ಎಂಬ ಒತ್ತಾಯಗಳು ಬಗ್ಗೆ ಈಗಲೇ ಏನೂ ಹೇಳಲು ಆಗದು.ತನಿಖೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ’ಎಂದರು.

‘ಅಪರಾಧಿಗಳಿಗೆ ಪರಿಹಾರ ಕೊಡುವ ಪದ್ಧತಿ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ತ್ವರಿತ ಸುದ್ದಿ, ನಿಖರ ಮಾಹಿತಿಗೆwww.prajavani.netನೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.