ಮಂಗಳೂರು: ಸುರತ್ಕಲ್‌ನಲ್ಲಿ ಗುರುವಾರ ನಡೆದ ಕಾಟಿಪಳ್ಳ ಮಂಗಲಪೇಟೆಯ ಮಹಮ್ಮದ್ ಪಾಝಿಲ್ ಹತ್ಯೆ ಪ್ರಕರಣದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮಂಗಳೂರಿನ ಅಜಿತ್ ಕ್ರಾಸ್ತ ಎಂದು ಗುರುತಿಸಲಾಗಿದೆ. ಇದನ್ನು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ‘ಪ್ರಜಾವಾಣಿ’ಗೆ ಖಚಿತಪಡಿಸಿದರು.

ಸದ್ಯಕ್ಕೆಆರೋಪಿಯು ಮಂಗಳೂರು ಸಿಸಿಬಿ ವಶದಲ್ಲಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಅಜಿತ್ ಕ್ರಾಸ್ತಾ ಅವರು ಕೃತ್ಯಕ್ಕೆ ಬಳಸಲಾದ ಹ್ಯುಂಡೈ ಕಾರಿನ ಮಾಲೀಕ. ಕೃತ್ಯದಲ್ಲಿ ಅಜಿತ್ ನೇರವಾಗಿ ಭಾಗಿಯಾಗಿದ್ದನೇ, ಅಥವಾ ಅವರ ಕಾರನ್ನು ಮಾತ್ರ ಬಳಸಲಾಗಿತ್ತೇ ಎಂಬುದು ವಿಚಾರಣೆ ಬಳಿಕವಷ್ಟೇ ತಿಳಿದು ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಓದಿ...ಕೊಲೆ ಸಂತ್ರಸ್ತರಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.