ಮಂಗಳೂರು: ಪಡುಮಲೆ ಕೋಟಿ ಚೆನ್ನಯರ ಮೂಲಸ್ಥಾನ ಹಾಗೂ ಜನ್ಮಸ್ಥಾನದಲ್ಲಿ ಏ. 22ರಿಂದ 24ರವರೆಗೆ ಹಮ್ಮಿಕೊಂಡಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿದೆ. ವಾರಂತ್ಯದ ಎರಡು ದಿನಗಳಲ್ಲಿ ಕರ್ಫ್ಯೂ ವಿಧಿಸಿರುವ ಕಾರಣ ಪಡುಮಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿ ಪ್ರಕಾರ, ಯಾವುದೇ ಧಾರ್ಮಿಕ ಕಾರ್ಯಕ್ರಮ ಗಳಿಗೂ ಅವಕಾಶ ಇಲ್ಲದ ಕಾರಣ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಮುಂದಿನ ಮಾರ್ಗಸೂಚಿ ನೋಡಿಕೊಂಡು ಘೋಷಣೆ ಮಾಡಲಾಗುತ್ತದೆ. ಈವರೆಗೂ ಭಕ್ತಾದಿಗಳಿಂದ ಅದ್ಭುತ ಬೆಂಬಲ ದೊರಕಿದ್ದು, ಮುಂದಕ್ಕೂ ಸಹಕಾರ ನಿರೀಕ್ಷೆ ಮಾಡುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.