ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಸಂಸ್ಥಾಪನಾ ದಿನದ ಅಂಗವಾಗಿ ಸೋಮವಾರ ಮಧ್ಯಾಹ್ನ ಇಲ್ಲಿನ ಉಳ್ಳಾಲದ ಮದನಿ ನಗರದಿಂದ ದೇರಳಕಟ್ಟೆಯ ಗ್ರೀನ್ ಮೈದಾನದವರೆಗೆ ಹಮ್ಮಿಕೊಂಡಿದ್ದ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ರ್ಯಾಲಿ ನಡೆಸಲು ಅನುಮತಿ ನಿರಾಕರಿಸಿರುವುದಾಗಿ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಕೋದಂಡರಾಮ ಅವರು ಪಿಎಫ್ಐ ಮುಖಂಡರಿಗೆ ಮಾಹಿತಿ ನೀಡಿದ್ದಾರೆ. ಆದರೆ, ರ್ಯಾಲಿ ನಡೆಸಿಯೇ ಸಿದ್ಧ ಎಂದು ಪಿಎಫ್ಐ ಮುಖಂಡರು ಮತ್ತು ಕಾರ್ಯಕರ್ತರು ಹಟ ಹಿಡಿದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮದನಿ ನಗರದತ್ತ ಪಿಎಫ್ಐ ಕಾರ್ಯಕರ್ತರು ಬರುತ್ತಿದ್ದಾರೆ. ಅಲ್ಲಿ ಉಳ್ಳಾಲ ಠಾಣೆಯ ಪೊಲೀಸರು ಮತ್ತು ರಾಜ್ಯ ಮೀಸಲು ಪೊಲೀಸ್ ಪಡೆಯ 300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರ್ಯಾಲಿ ನಡೆಸದಂತೆ ಪಿಎಫ್ಐ ಮುಖಂಡರಿಗೆ ತಾಕೀತು ಮಾಡಿದ್ದಾರೆ. ದೇರಳಕಟ್ಟೆಯ ಗ್ರೀನ್ ಮೈದಾನದಲ್ಲಿ ಸಭಾ ಕಾರ್ಯಕ್ರಮವನ್ನಷ್ಟೇ ನಡೆಸುವಂತೆ ಸಂಘಟಕರಿಗೆ ಪೊಲೀಸ್ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.