ಮಂಗಳೂರು: ನಗರದಲ್ಲಿ ವಾಸ್ತವ್ಯ ಹೂಡುವ ವಿದೇಶಿಯರ ಬಗ್ಗೆ ಸಕಾಲಕ್ಕೆ ಮಾಹಿತಿ ನೀಡುವಂತೆ ಮತ್ತು 24 ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡುವಂತೆ ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸೂಚನೆ ನೀಡಿದ್ದಾರೆ.

ವಿವಿಧ ಕಾರಣಗಳಿಗೆ ನಗರಕ್ಕೆ ಬರುವ ವಿದೇಶಿಯರು ಹೋಟೆಲ್, ಅತಿಥಿಗೃಹ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಅವರು ವಾಸ್ತವ್ಯ ಹೂಡಿದ 24 ಗಂಟೆಗಳ ಒಳಗೆ ಆನ್‌ಲೈನ್‌ನಲ್ಲಿ (s-form ಮತ್ತು c-form) ನೋಂದಣಿಯನ್ನು ಮಾಡಬೇಕು ಎಂದರು.

ವಿದೇಶಿಗರು ತಂಗುವ ಕೆಲವು ಹೋಟೆಲ್, ಅತಿಥಿಗೃಹ, ಸರ್ವಿಸ್ ಅಪಾರ್ಟ್‌ಮೆಂಟ್, ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿತ ಸಮಯಕ್ಕೆ ವಿದೇಶಿಗರ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸದಿರುವುದು ಕಂಡುಬಂದಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.