ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2020ನೇ ಸಾಲಿನ ‘ಪ.ಗೋ.ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಉಪಸಂಪಾದಕ/ವರದಿಗಾರ ಪ್ರದೀಶ್ ಎಚ್.ಮರೋಡಿ ಆಯ್ಕೆಯಾಗಿದ್ದಾರೆ.

‘ಪ್ರಜಾವಾಣಿ’ಯಲ್ಲಿ 2020ರ ಜೂನ್ 25ರಂದು ಪ್ರಕಟವಾದ ಅವರ ‘ಕೇಳುತ್ತಿಲ್ಲ ಮಲೆಯ ಮಕ್ಕಳ ಅಳಲು’ ವರದಿಗೆ ಪ್ರಶಸ್ತಿ ಬಂದಿದೆ.

ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ, ಪುತ್ತೂರು ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ.ಸುಂದರ ಕೇನಾಜೆ ಮತ್ತು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಕಿಕ್ಕೇರಿ ನೇತೃತ್ವದ ಸಮಿತಿಯು ಪ್ರಶಸ್ತಿಗೆ ಆಯ್ಕೆ ಮಾಡಿದೆ.

‘ಪ.ಗೋ.ಪ್ರಶಸ್ತಿ ಪ್ರದಾನ’ ಸಮಾರಂಭವು ಮಾ.30ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.