ಮಂಗಳೂರು: ‘ಕೇಂದ್ರ ಸರ್ಕಾರ ಜನರಿಗೆ ₹15 ಲಕ್ಷ ಕೊಡುವುದಾಗಿ ಹೇಳಿತ್ತು, ಕೊಟ್ಟಿಲ್ಲ ಎಂದು ರಾಜ್ಯದ ಸಚಿವರು ಆರೋಪಿಸುವ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾರಿಗೂ ಗ್ಯಾರಂಟಿ ಕಾರ್ಡ್ ಕೊಟ್ಟಿಲ್ಲ. ವಿದೇಶದಿಂದ ಕಪ್ಪು ಹಣ ತಂದರೆ ಒಬ್ಬೊಬ್ಬರಿಗೆ ₹15 ಲಕ್ಷ ಕೊಡುವಷ್ಟು ಇದೆ ಎಂದು ಹೇಳಿದ್ದರು ಅಷ್ಟೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಮೂರು ಸುತ್ತಿನ ಸಭೆ ನಡೆಸಿದರೂ ‘ಗ್ಯಾರಂಟಿ’ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಣಯಕ್ಕೆ ಬರಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಜನರಿಗೆ ಮೋಸ ಮಾಡಿರುವ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇರುವವರು. ರಾಜ್ಯದ ಆರ್ಥಿಕ ಸ್ಥಿತಿ ಗೊತ್ತಿದ್ದೂ, ಜನರಿಗೆ ಸುಳ್ಳು ಹೇಳಿರುವ ಕಾಂಗ್ರೆಸ್, ಸುಳ್ಳುಗಾರ ಪಕ್ಷವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಷರತ್ತುರಹಿತವಾಗಿ ಅನುಷ್ಠಾನಗೊಳಿಸದಿದ್ದರೆ, ಬಿಜೆಪಿ ಜನರ ಪರವಾಗಿ ರಾಜ್ಯವ್ಯಾಪಿ ಹೋರಾಟ ಮಾಡಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.