ಮಂಗಳೂರು: ತರಬೇತಿಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ವಕೀಲ ಕೆ.ಎಸ್.ಎನ್. ರಾಜೇಶ್ನನ್ನು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್, ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಬಾರ್ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ನೇತೃತ್ವದ ಸಮಿತಿ ಈ ಕ್ರಮ ಕೈಗೊಂಡಿದೆ.

ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ರಾಜೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆದಿದೆ. ವಕೀಲರ ಕಾಯ್ದೆಯ 35ನೇ ಸೆಕ್ಷನ್ ಅಡಿಯಲ್ಲಿ ಮುಂದಿನ ಆದೇಶದವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಾರ್ ಕೌನ್ಸಿಲ್ನಿಂದ ರಾಜೇಶ್ ಅಮಾನತುಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ವಕಾಲತು ವಹಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಹಿರಿಯ ವಕೀಲರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.