ಮಂಗಳೂರು: ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಹಾಗೂ ಜೀವ ವೈವಿಧ್ಯದ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಗಾಗಿ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಪರಿಸರ ತಜ್ಞ ಪ್ರೊ.ಮಾಧವ ಗಾಡ್ಗೀಳ್ ಅವರು ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸಂರಕ್ಷಣೆ ಕುರಿತು ಸಲ್ಲಿಸಿದ್ದ ವರದಿಗೆ ಜನರಿಂದ ವಿರೋಧ ವ್ಯಕ್ತವಾಗಿದ್ದರಿಂದ, ಅದನ್ನು ಪುನರ್ಪರಿಶೀಲಿಸಲು ಕೇಂದ್ರ ಸರ್ಕಾರ ಕಸ್ತೂರಿರಂಗನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಅ ವರದಿಗೂ ನಮ್ಮ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ನಾನು ಅರಣ್ಯ ಸಚಿವನಾಗಿದ್ದಾಗ, ಜನ ವಸತಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಿ, ಆ ವರದಿಯ ಕೆಲವೊಂದು ಅಂಶಗಳನ್ನು ಕೈಬಿಡುವಂತೆ ಸರ್ಕಾರ ಶಿಫಾರಸು ಮಾಡಿತ್ತು’ ಎಂದರು.

‘ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರವನ್ನು ಉಳಿಸುವುದು ಕೇಂದ್ರ ಸರ್ಕಾರದ ಹೊಣೆ. ಈ ಬಗ್ಗೆ ಕೇಂದ್ರವು ಐದಾರು ಸಲ ಕರಡು ಅಧಿಸೂಚನೆ ಹೊರಡಿಸಿದ್ದರೂ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ. ಕೇರಳದ ವಯನಾಡಿನಲ್ಲಿ ಭೂಕುಸಿತದ ಬಳಿಕ ಕೇಂದ್ರವು ಮತ್ತೊಮ್ಮೆ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ವಿಚಾರದಲ್ಲಿ ರಾಜ್ಯಗಳಿಗೆ ಅಭಿಪ್ರಾಯ ಹೇಳುವುದಕ್ಕೆ ಮಾತ್ರ ಅಧಿಕಾರವಿದೆ. ಆದರೆ, ವರದಿ ಜಾರಿ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಬೇಕಿರುವುದು ಕೇಂದ್ರ. ಸುಮ್ಮನೆ ಕಾಲಹರಣ ಮಾಡುವ ಬದಲು ಪಶ್ಚಿಮ ಘಟ್ಟ ರಕ್ಷಣೆ ದೃಷ್ಟಿಯಿಂದ ಕೇಂದ್ರವು ಸ್ಪಷ್ಟ ನಿರ್ಧಾರವನ್ನು ಕೇಂದ್ರ ತಳೆಯಬೇಕು’ ಎಂದು ಆಗ್ರಹಿಸಿದರು.

‘ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅತಂತ್ರಗೊಳಿಸಬೇಕು ಹಾಗೂ ಕಾಂಗ್ರೆಸ್‌ಗೆ ಕೆಟ್ಟ ಹೆಸರು ತರಬೇಕೆಂಬ ದುರುದ್ದೇಶದಿಂದ ಹಗರಣವೇ ಅಲ್ಲದ ವಿಷಯವನ್ನು ಮುಂದಿಟ್ಟು ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯಪಾಲರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಪ್ರೇರಿತವಾಗಿ ಮುಖ್ಯಂಮಂತ್ರಿಯವರಿಗೆ ನೋಟಿಸ್ ನೀಡಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ತರುವ ಇಂತಹ ಯತ್ನಗಳು ಫಲಿಸುವುದಿಲ್ಲ’ ಎಂದರು.

‘ಜನಾರ್ದನ ರೆಡ್ಡಿ ಹಗರಣ ಬೆಳಕಿಗೆ ಬಂದಾಗ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಸಾವಿರಾರು ಕೋಟಿ ರೂಪಾಯಿ ಹಣ ನೀಡಬೇಕಾಗುತ್ತದೆ ಎಂದು ಆರೋಪ ಮಾಡಿದ್ದರು. ಬಿ.ಎಸ್.ಯಡಿಯೂರಪ್ಪ ಸ್ವತಃ ಜೈಲಿಗೆ ಹೋಗೀಬಂದವರು. ಅವರ ಹಗರಣಗಳನ್ನೇ ಹೊತ್ತು ಅವರು ಪಾದಯಾತ್ರೆ ನಡೆಸುತ್ತಿದ್ದಾರೆ’ ಎಂದರು.

ಪಾಲಿಕೆ ಸದಸ್ಯ ಶಶಶಿಧರ ಹೆಗ್ಡೆ, ನವೀನ್ ಡಿಸೋಜ, ಪಕ್ಷದ ಮುಖಂಡರಾದ ಅಪ್ಪಿ, ಎಂ.ಜಿ.ಹೆಗಡೆ, ಇಮ್ರಾನ್, ಕಿರಣ್ ಬುಡ್ಲೆಗುತ್ತು, ನಿತ್ಯಾನಂದ ಶೆಟ್ಟಿ, ಅಶ್ರಫ್ ಕೆ, ಹರಿನಾಥ್, ಟಿ.ಕೆ. ಸುಧೀರ್, ಪ್ರೇಮ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.