ಮಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ–2 ಪೋಕ್ಸೊ ವಿಶೇಷ ನ್ಯಾಯಾಲಯವು ಮರಣದಂಡನೆ ಹಾಗೂ ₹1.20 ಲಕ್ಷ ಮೊತ್ತದ ದಂಡ ವಿಧಿಸಿ ಆದೇಶಿಸಿದೆ.

ಮಧ್ಯಪ್ರದೇಶ ರಾಜ್ಯದ ಪನ್ನಾ ಜಿಲ್ಲೆಯ ಜಯ್ ಸಿಂಗ್ (21), ಮುಕೇಶ್ ಸಿಂಗ್ (20) ಮತ್ತು ಜಾರ್ಖಂಡ್ ರಾಜ್ಯದ ರಾಂಚಿಯ ಮನೀಷ್ ತಿರ್ಕಿ (33) ಶಿಕ್ಷೆಗೆ ಒಳಗಾದ ಅಪರಾಧಿಗಳು.

ಘಟನೆ ವಿವರ:

ತಿರುವೈಲು ಗ್ರಾಮದ ಪರಾರಿಯಲ್ಲಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿದ್ದ ಈ ಮೂವರು, ಇದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ನ ದಂಪತಿಯ ಎಂಟು ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ನಡೆಸುವ ಸಂಚು ರೂಪಿಸಿದ್ದರು. ಫ್ಯಾಕ್ಟರಿಗೆ ರಜೆ ಇರುವ ದಿನ (2021 ನವೆಂಬರ್ 21), ಇತರ ಕೆಲಸಗಾರರು ಇಲ್ಲದ ಸಮಯ ನೋಡಿ, ಅಲ್ಲಿಯೇ ಆಟವಾಡಿಕೊಂಡಿದ್ದ ಬಾಲಕಿಗೆ ಸಿಹಿ ತಿನಿಸು ನೀಡಿ, ಸಿಸಿಟಿವಿ ಕ್ಯಾಮೆರಾ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದರು. ಬಾಲಕಿ ನೋವಿನಿಂದ ಚೀತ್ಕರಿಸಿದ್ದು, ಯಾರಿಗೂ ಕೇಳಬಾರದೆಂದು ಮೊದಲ ಆರೋಪಿ ಜಯ್ ಸಿಂಗ್ ಆಕೆಯ ಕುತ್ತಿಗೆಯನ್ನು ಹಿಸುಕಿ ಸಾಯಿಸಿದ್ದನು.

ಈ ಸಂಬಂಧ ಬಾಲಕಿಯ ತಾಯಿ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಆಗಿನ ಪೊಲೀಸ್ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತರ ಪರ ಒಟ್ಟು 30 ಸಾಕ್ಷಿದಾರರ ವಿಚಾರಣೆ, 74 ದಾಖಲೆಗಳು, ವೈಜ್ಞಾನಿಕ ವರದಿಗಳನ್ನು ಸಲ್ಲಿಸಲಾಗಿತ್ತು. ವಾದ–ಪ್ರತಿವಾದ ಆಲಿಸಿದ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಗುರುವಾರ, ಅಪರಾಧಿಗಳಿಗೆ ಮರಣದಂಡನೆ ಪ್ರಕಟಿಸಿ, ಆದೇಶ ಹೊರಡಿಸಿದ್ದಾರೆ.

ದಂಡದ ಹಣ ₹1.20 ಲಕ್ಷವನ್ನು ಮೃತ ಬಾಲಕಿಯ ಪಾಲಕರಿಗೆ ಪಾವತಿಸುವಂತೆ, ಸಂತ್ರಸ್ತರ ಪರಿಹಾರ ಯೋಜನೆಯಡಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಬಾಲಕಿಯ ಪಾಲಕರಿಗೆ ಹೆಚ್ಚುವರಿಯಾಗಿ ₹3.80 ಲಕ್ಷ ಮೊತ್ತ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಆರಂಭಿಕ ಹಂತದಲ್ಲಿ ನಿವೃತ್ತ ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಕೆಲವು ಸಾಕ್ಷಿದಾರರಿಂದ ಮಾಹಿತಿ ಪಡೆದಿದ್ದರು. ನಂತರ ಸಂತ್ರಸ್ತರ ಪರವಾಗಿ ವಿಶೇಷ ಸರ್ಕಾರಿ ವಕೀಲ ಕೆ. ಬದರಿನಾಥ ನಾಯರಿ ವಾದ ಮಂಡಿಸಿದ್ದರು.

ಮಂಗಳೂರಿನ ಪೋಕ್ಸೊ ನ್ಯಾಯಾಲಯದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿರುವ ಪ್ರಥಮ ಪ್ರಕರಣ ಇದಾಗಿದೆ ಎಂದು ಬದರಿನಾಥ್ ತಿಳಿಸಿದ್ದಾರೆ. ಅಪರಾಧ ಕೃತ್ಯಕ್ಕೆ ಸಹಕರಿಸಿದ್ದ ಪ್ರಕರಣದ ನಾಲ್ಕನೇ ಆರೋಪಿ ಮಧ್ಯಪ್ರದೇಶದ ಮುನೀಮ್ ಸಿಂಗ್ ಜಾಮೀನಿನ ಮೇಲೆ ಹೊರಗಿದ್ದು, ಈ ಪ್ರಕರಣವು ತೀರ್ಪಿಗೆ ನಿಗದಿಯಾದ ನಂತರ ತಲೆಮರೆಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.