ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ (ಎಸ್‍ಸಿಡಿಸಿಸಿ) ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಬುಧವಾರ ನಡೆದ ಅಪೆಕ್ಸ್ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.

ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್ ಹಾಗೂ ನಿಕಟಪೂರ್ವ ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಎಸ್‍ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದಿರುವ ಕಾರಣ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಯಾಗಿದೆ. 20ನೇ ಬಾರಿ ಈ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ. ಹರೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್, ನಿರ್ದೇಶಕರು, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜು ಎಸ್. ಪೂಜಾರಿ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಎಸ್.ಬಿ. ಜಯರಾಮ್ ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.