ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು.

ಉಜಿರೆಯ ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸ್ವಚ್ಛತಾ ಅಭಿಯಾನ, ಶ್ರಮದಾನ, ವಿದ್ಯಾರ್ಥಿವೇತನ ವಿತರಣೆ ನಡೆಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸಿ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿರುವ 69ವಿದ್ಯಾರ್ಥಿಗಳಿಗೆ ₹15,15,100 ವಿದ್ಯಾರ್ಥಿವೇತನವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ವಿತರಿಸಿದರು.

ವಿದ್ಯಾರ್ಥಿಗಳು ಅವಕಾಶವನ್ನು ಬಳಸಿಕೊಂಡು ಆಚಾರವಂತರೂ, ವಿಚಾರವಂತರೂ ಆಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಪತ್ರಕರ್ತ ಲಕ್ಷ್ಮೀಮಚ್ಚಿನ ಮಾತನಾಡಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್.ಸತೀಶ್ಚಂದ್ರ ಇದ್ದರು.

ಸಂಸ್ಥೆಯ ಪ್ರಾಂಶುಪಾಲ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಉಪಪ್ರಾಂಶುಪಾಲ ರಾಜೇಶ್ ಬಿ. ವಂದಿಸಿದರು.

ಉಪನ್ಯಾಸಕರಾದ ದೀಕ್ಷಿತ್ ರೈ, ಮಹಾವೀರ ಜೈನ್, ದಿವ್ಯಾಕುಮಾರಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.