ಮಂಗಳೂರು: ಪದೋನ್ನತಿ ಪಡೆದು ದೆಹಲಿಗೆ ತೆರಳಲಿರುವ ಡಬ್ಲ್ಯುಎಚ್ಒ ಸರ್ವೇಕ್ಷಣಾಧಿಕಾರಿ ಡಾ. ಸತೀಶ್ಚಂದ್ರ ಡಿ.ಎಂ ಅವರನ್ನು ಶನಿವಾರ ಇಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸುರತ್ಕಲ್ ಜಿಲ್ಲಾ ತರಬೇತಿ ಕೇಂದ್ರ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ. ಅಶೋಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ಸತೀಶ್ಚಂದ್ರ ಅವರನ್ನು ಸನ್ಮಾನಿಸಿದರು. ಅವರು ಉಡುಪಿ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದು, ಪದೋನ್ನತಿ ಹೊಂದಿ, ದೆಹಲಿಯ ಡಬ್ಲ್ಯುಎಚ್ಒ ಕಂಟ್ರಿ ಆಫೀಸ್ನಲ್ಲಿ ತಾಂತ್ರಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ವೇಳೆ ಎಪಿಡೆಮಿಯೊಲಾಜಿಸ್ಟ್ ಡಾ. ಶಿಲ್ಪಾ, ಪ್ರವೀಣ್ ಕುಮಾರ್, ಅನುರಾಗ್, ತರಬೇತಿ ಕೇಂದ್ರದ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.